ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಮುಂಚೂಣಿಯಲ್ಲಿ

ಹಾವೇರಿ09: ಇಂದು ಮಹಿಳೆಯರು ಸಮಾಜದ ಎಲ್ಲ ರಂಗಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ ಎಂದು ಪ್ರಧಾನ ಸಿವ್ಹಿಲ್ ನ್ಯಾಯಾಧೀಶರಾದ ಹಾಗೂ ಜೆ.ಎಂ.ಎಫ್.ಸಿಯ  ಲಕ್ಷ್ಮೀ ಎನ್.ಗರಗ  ಅವರು ಹೇಳಿದರು. 

     ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಸಭಾಭವನದಲ್ಲಿ  ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಮತ್ತು ನೆರವು  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಸಮಾಜದಲ್ಲಿ ಹೆಣ್ಣು ತಾಯಿಯಾಗಿ, ಮಗಳಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ ಕಷ್ಟ-ಸುಖ ಸಹಿಸಿಕೊಂಡು ಜೀವನ ಸಾಗಿಸುತ್ತಾ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸುತ್ತಿದ್ದಾಳೆ. ಮಹಿಳೆಯಿರಿಗೆ ತಮ್ಮ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಮಾಹಿತಿಯಿರಬೇಕು. ಸಂವಿಧಾನದಲ್ಲಿರುವ ಹಕ್ಕುಗಳು ಹಾಗೂ ಕರ್ತವ್ಯಗಳ ಸದುಪಯೋಗಪಡೆದುಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು. ಪ್ರಸ್ತುತ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಕಾನೂನು ಅರಿವಿನ ಅವಶ್ಯಕತೆಯಿದೆ ಎಂದು ಹೇಳಿದರು. 

ವಿಶ್ವಸಂಸ್ಥೆಯು 1975 ಮಾರ್ಚ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಿತು. ನಮ್ಮ ದೇಶದಲ್ಲಿ 1976 ಮಾರ್ಚ 8 ರಂದು ಪ್ರಥಮ ಬಾರಿಗೆ ಆಚರಿಸಲಾಯಿತು. ಮೂಲಭೂತ ಕರ್ತವ್ಯದಲ್ಲಿ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆ ಹಾಗೂ ಕುಂದುಕೊರತೆ ಬರದಹಾಗೆ ನೋಡಿಕೊಳ್ಳಬೇಕು ಮತ್ತು ಹೆಣ್ಣು ಮಕ್ಕಳನ್ನು ಗೌರವಿಸಬೇಕು ಎಂದು ಸಂವಿಧಾನ ಪ್ರತಿ ಪ್ರಜೆಗೂ ತಿಳಿಸುತ್ತದೆ ಎಂದು ಹೇಳಿದರು.

ಮಕ್ಕಳ ಹಕ್ಕು ಪ್ರಕಾರ 6 ರಿಂದ 14 ವರ್ಷದ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣವಿದೆ. ಗ್ರಾಮೀಣ ಭಾಗದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರುವಂತೆ ಪ್ರೋತ್ಸಾಹಿಸಬೇಕು. ಬಾಲ ಕಾಮರ್ಿಕ ಕಾಯ್ದೆ ಅನ್ವಯ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡರೆ ಶಿಕ್ಷೆಯಿದೆ.  ಬಾಲಕಾಮರ್ಿಕ ಮಕ್ಕಳನ್ನು ರಕ್ಷಿಸಿ ಅವರಿಗೆ ಶಿಕ್ಷಣ  ನೀಡಬೇಕು. ಬಾಲ್ಯವಿವಾಹ ಕಾಯ್ದೆ ಅನ್ವಯ ಹೆಣ್ಣಿಗೆ 18 ಹಾಗೂ ಗಂಡು ಮಕ್ಕಳಿಗೆ 21 ವಯೋಮಾನವಿರಬೇಕು. 

ಇದನ್ನು ಉಲ್ಲಂಘಿಸಿದರೇ ಕಾನೂನಡಿ ಶಿಕ್ಷೆಗೆ ಗುರಿಯಾಗುತ್ತಾರೆ. ಇಂತಹ ಪ್ರಕರಣಗಳು ನಿಮ್ಮ ಸುತ್ತಮುತ್ತ ನಡೆದಲ್ಲಿ ಅವರಿಗೆ ತಿಳುವಳಿಕೆ ನೀಡಿ ಅಥವಾ ಸಂಬಂಧಪಟ್ಟ ಅಧಿಕಾರಿಗೆ ತಿಳಿಸಿ ಹೆಣ್ಣುಮಗುವನ್ನು ರಕ್ಷಿಸುವ ಕಾರ್ಯ ಮಾಡಬೇಕು. ಸ್ವಾತಂತ್ರ್ಯ ಹೋರಾಟಗಾತರ್ಿಯರಾದ ಕಿತ್ತೂರು ರಾಣಿ ಚೆನ್ನಮ್ಮಾ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸಮಾಜ ಸೇವಕರಾದ ಮದರ ತೆರೆಸಾ, ಕ್ರೀಡಾಪಟು ಪಿ.ವಿ.ಸಿಂಧೂ ಹೀಗೆ ಹಲವಾರು ಮಹಿಳೆಯರ ಜೀವನ ನಮಗೆಲ್ಲಾ ಮಾದರಿಯಾಗಿದೆ  ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದರ್ೇಶಕರಾದ ಪಿ.ವೈ.ಶೆಟ್ಟಪ್ಪನವರ ಮಾತನಾಡಿ, ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಸದೃಡರಾಗಿರಬೇಕು. ಮಹಿಳೆಯರು ತಮಗೆ ನೀಡಿದ ಹಕ್ಕಗಳನ್ನು ಚಲಾಯಿಸುವಲ್ಲಿ  ಹಿಂಜರಿಯುತ್ತಿದ್ದಾರೆ. ಮಹಿಳೆಯರಿಗಿರುವ ಪ್ರತಿಯೊಂದು ಹಕ್ಕಗಳ ಬಗ್ಗೆ ಅರಿವುಹೊಂದಿ ಅವುಗಳ ಲಾಭಪಡೆಕೊಳ್ಳಲು ಮುಂದೆ ಬರಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಮತ್ತು ಸಶಕ್ತಿಕರಣ ಕುರಿತು ಹುಕ್ಕೇರಿಮಠದ ಶ್ರೀಶಿವಲಿಂಗೇಶ್ವರ ಮಹಿಳಾ ಮಹಾವಿದಯಾಲಯದ ವಾಣಿಜ್ಯ ವಿಭಾಗದ ಸಂಯೋಜಕಿಯಾದ ಶ್ರೀಮತಿ ಡಾ. ಪುಷ್ಪಾವತಿ ಶೆಲವಡಿಮಠ, ಮಹಿಳೆಯರಿಗಾಗಿ ಇರುವ ಕಾನೂನುಗಳ ಕುರಿತು ತಾಲೂಕಾ ಮಹಿಳಾ ಸಂರಕ್ಷಣಾಧಿಕಾರಿಗಳು ಹಾಗೂ ಪ್ರಭಾರ ಸಿಡಿಪಿಓ ಕುಮಾರಿ ಉಮಾ.ಕೆ.ಎಸ್, ಪೊಲೀಸ್ ದೂರು ಪ್ರಾಧಿಕಾರದ ರಚನೆ, ಮಹತ್ವ ಮತ್ತು ಕಾರ್ಯವೈಖರಿ ವಿಷಯ ಕುರಿತು ನಗರ ಪೊಲೀಸ್ ಠಾಣೆಯ   ಪಿ.ಆಯ್. ಪ್ರಭಾವತಿ ಶೇತಸನದಿ ಅವರು ವಿದ್ಯಾಥರ್ಿಗಳಿಗೆ ಉಪನ್ಯಾಸ ನೀಡಿದರು. ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಸವಿತಾ ಹಿರೇಮಠ ಅಧ್ಯಕ್ಷತೆವಹಿಸಿ ಮಾತನಾಡಿದರು. 

           ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ಕೆ. ಶ್ರೀವಿದ್ಯಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಪದ್ಮಾವತಿ. ವಿದ್ಯಾಲಯದ ಎನ್.ಎಸ್.ಎಸ್ ಅಧಿಕಾರಿಗಳಾದ ಬಿ.ವಿ. ಹಿರೇಮಠ, ವಿ.ವಿ. ಚರಂತಿಮಠ ಹಾಗೂ ಯುಥ್ ರೆಡ್ ಕ್ರಾಸ್ ಅಧಿಕಾರಿಗಳಾದ ಎಸ್.ಎಚ್. ಸಂಗಾಪುರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.