ಮಹಿಳೆ ಕಾಣೆ: ಹೀನಾ

Woman missing: Vijaypur news

ವಿಜಯಪುರ 14: ವಿಜಯಪುರದ ಹಮಾಲ ಕಾಲನಿಯ 25 ವರ್ಷದ ಹೀನಾ ಎಂಬ ಮಹಿಳೆ ಮೇ. 6ರ ಬೆಳಿಗ್ಗೆ 8ರಿಂದ 9ಗಂಟೆಗೆ ಮನೆಯಿಂದ ಕಾಣೆಯಾಗಿದ್ದಾಳೆ. ಈ ಕುರಿತು ವಿಜಯಪುರದ ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ಮಹಿಳೆ ಪತ್ತೆಗೆ ಗೋಲಗುಮ್ಮಜ್ ಪೊಲೀಸ್ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.  

ಮಹಿಳೆಯು 4.7 ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ದುಂಡ ಮುಖ, ನೆಟ್ಟನೆಯ ಮುಖ, ಹಿಂದಿ ಮತ್ತು ಕನ್ನಡ ಭಾಷೆ ಬಲ್ಲವಳಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಬುರ್ಕಾ ಧರಿಸಿದ್ದಳು. ಈ ಚಹರೆಪಟ್ಟಿಯುಳ್ಳ ಮಹಿಳೆ  ಪತ್ತೆಯಾದಲ್ಲಿ ಸಾರ್ವಜನಿಕರು ಗೋಲಗುಮ್ಮಜ್ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08352-250214, ಹಾಗೂ ಉಪ ವಿಭಾಗಾಧಿಕಾರಿಗಳ ದೂರವಾಣಿ ಸಂಖ್ಯೆ: 08352-250252ಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.