ಕೊಪ್ಪಳ 07: ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಹಿಳೆಯರಿಗೆ ಮತದಾನ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗಾವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನೆಡೆದ ಅಂಗನವಾಡಿ ಶಿಕ್ಷಕರಿಗೆ & ಪರಿಚಾರಿಕರಿಗೆ ಹಮ್ಮಿಕೊಂಡ ಕ್ರೀಡಾಕೂಟದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಬಗ್ಗೆ ಮಾಹಿತಿ ನೀಡಲಾಯಿತು. ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರಗಳ ಕುರಿತು ಮಾಹಿತಿ ನೀಡಿ, ಅಣಕು ಮತದಾನವನ್ನು ಮಾಡಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕರಾದ ಈರಣ್ಣ ಪಂಚಾಳ್, ಸ್ವೀಪ್ ಸಿಮಿತಿಯ ಶ್ರೀನಿವಾಸ್ ಚಿತ್ರಗಾರ ಸೇರಿದಂತೆ ತಾಲೂಕ ಸಿಡಿಪಿಓ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಇದೇ ಸಂದರ್ಭದಲ್ಲಿ ಹಾಜರಿದ್ದರು.