ಕೊಪ್ಪಳ 05: ವಿಶ್ವ ಪರಿಸರ ದಿನ ಹಾಗೂ ವನಮೋಹತ್ಸವ ಕಾರ್ಯಕ್ರಮ ಅಂಗವಾಗಿ ಅರಣ್ಯ ಇಲಾಖೆಯಿಂದ 2ನೇ ಸುತ್ತಿನ ಸಸಿ ನೆಡುವ ಕಾರ್ಯಕ್ರಮವನ್ನು ಜೂ. 05 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಜೂ. 05 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾಡಳಿತ ಭವನದ ಮುಂದೆ ಮುಖ್ಯ ರಸ್ತೆಯ ಹತ್ತಿರ ಸಸಿ ನೆಡುವ ಮೂಲಕ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಂಜೀವ್ ವಿ. ಕುಲಕಣರ್ಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮತ್ತು ಕೊಪ್ಪಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಾಲ ಕ್ಷೀರಸಾಗರ ಅವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.