ವಿಶ್ವ ಅಧಿಕ ರಕ್ತದೊತ್ತಡ ದಿನ: ಜನಜಾಗೃತಿ

World Hypertension Day: Public Awareness

ಬೆಳಗಾವಿ 22: ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್‌-ಇನ್ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.  

ಗುರುವಾರ ದಿ. 22ರಂದು ಬೆಳಗ್ಗೆ 10ರಿಂದ 11ಗಂಟೆವರೆಗೆ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನದ ಅಂಗವಾಗಿ ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಯಿತು.  

ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ  ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ. ರೇಖಾ ಪಾಟೀಲ, ಡಾ. ಜಯಪ್ರಕಾಶ ಅಪ್ಪಾಜಿಗೋಳ, ಡಾ. ಮಾಧವ ಪ್ರಭು ಮತ್ತು ಡಾ. ಆರತಿ ದರ್ಶನ ಅವರು ಭಾಗವಹಿಸಿದ್ದರು.  

ಅಧಿಕ ರಕ್ತದೊತ್ತಡ ಅಥವಾ ಹೈ-ಬಿಪಿ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರಲ್ಲಿ ಕಂಡು ಬರುವ ಆರೋಗ್ಯ ಸಮಸ್ಯೆಯಾಗಿದೆ. ಇದು ಬರೀ ವಯಸ್ಸಾದವರಲ್ಲಿ ಮಾತ್ರವಲ್ಲ ಯುವಕರೂ ಕೂಡ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ 30-40 ವರ್ಷ ವಯಸ್ಸಿನವರೂ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಹೊಂದಿದ್ದಾರೆ. ಇದಕ್ಕೆ ಕಾರಣವೇನು, ಲಕ್ಷಣಗಳು, ಚಿಕಿತ್ಸೆ ಮತ್ತು ಇದನ್ನು ಯಾವ ರೀತಿ ತಡೆಗಟ್ಟಬಹುದು ಎಂಬುದರ ಕುರಿತು ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್‌. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.