ಪರಿಸರ ಸ್ವಚ್ಛತೆ ಅರಿವು ಮೂಡಿಸುವ ಜಾಗೃತಿ ಜಾಥಾಕ್ಕೆ ಅಧಿಕಾರಿಗಳಿಂದ ಚಾಲನೆ

ಹಾವೇರಿ:16ರಾಷ್ಟ್ರೀಯ ಡೆಂಗ್ಯೂ ದಿನದ  ಅಂಗವಾಗಿ ಸೊಳ್ಳೆಗಳ ನಿಯಂತ್ರಣ ಹಾಗೂ ಪರಿಸರ ಸ್ವಚ್ಛತೆ ಅರಿವು ಮೂಡಿಸಲು ನಗರದಲ್ಲಿ ಆಯೋಜಿಸಲಾದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ ಹಾಗೂ ಜಿಲ್ಲಾ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ  ಆಯೋಜಿಸಲಾದ ಜಾಥಾವನ್ನು ಗುರುವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯು ತಡೆಯ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ನಿರಂತರ ಆರೋಗ್ಯ ಶಿಕ್ಷಣದ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. 

     ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಎಸ್, ರಾಘವೇಂದ್ರಸ್ವಾಮಿ,  ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ನಾಗರಾಜ ನಾಯಕ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಸುಹೀಲ್ ಹರವಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ. ಪ್ರಭಾಕರ ಕುಂದೂರು. ಸಿಬ್ಬಂದಿಗಳಾದ ಮಲ್ಲಿಕಾಜರ್ುನ ಮಡಿವಾಳರ, ಪಿ.ಎನ್ ಪಾಟೀಲ್, ಜಗದೀಶ ಕೆ, ರವಿ ಕೆ.ಆರ್, ರತ್ನಂ, . ಸಿ.ಎಫ್ ಹೆಡಿಯಾಲ, ಸಕರ್ಾರಿ ನಸರ್ಿಂಗ್ ಶಾಲೆಯ ವಿದ್ಯಾಥರ್ಿಗಳು, ಆಶಾ  ಕಾರ್ಯಕತರ್ೆಯರು ಭಾಗವಹಿಸಿದ್ದರು.