ಗದಗ 10: ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಗದಗ ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರ ಅಧ್ಯಕ್ಷತೆಯಲ್ಲಿಂದು ಹಡಪದ ಅಪ್ಪಣ್ಣನವರ ಜಯಂತಿ ಕುರಿತು ಪೂರ್ವಭಾವಿ ಸಭೆ ಜರುಗಿತು. ಜುಲೈ 16ರಂದು ಮ.1.00 ಗಂಟೆಗೆ ಹಡಪದ ಅಪ್ಪಣ್ಣನವರ ಜಯಂತಿಯನ್ನು ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ, ವ್ಯವಸ್ಥಿತವಾಗಿ ಆಚರಿಸಲಾಗುವುದು ಎಂದು ಗದಗ ತಹಶೀಲ್ದಾರರಾದ ಶ್ರೀನಿವಾಸ ಮೂತರ್ಿ ಕುಲಕಣರ್ಿ ತಿಳಿಸಿದರು. ತಾಲೂಕು ಮಟ್ಟದಲ್ಲಿಯೂ ಹಡಪದ ಅಪ್ಪಣ್ಣ ಜಯಂತಿ ಆಚರಿಸುವುದರ ಕುರಿತು ನಿದರ್ೇಶನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಸಿದ್ಧಲಿಂಗೇಶ ರಂಗಣ್ಣವರ ಅವರು ತಿಳಿಸಿದರು.
ಸಭೆಯಲ್ಲಿ ಕಾರ್ಯಕ್ರಮದ ಉಪನ್ಯಾಸಕರ ನೇಮಕ, ಆಮಂತ್ರಣ ಪತ್ರಿಕೆ ಮುದ್ರಣ, ಬ್ಯಾನರ್ ತಯಾರಿಕೆ ವೇದಿಕೆ ಕಾರ್ಯಕ್ರಮದ ಕುರಿತು ಚಚರ್ಿಸಲಾಯಿತು. ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಮೋಹನ ಚಂದಪ್ಪನವರ, ಪ್ರ. ಕಾರ್ಯದಶರ್ಿ ಅಶೋಕ ಪ್ರಭು, ಉಪಾಧ್ಯಕ್ಷರಾದ ಕೆ.ಬಿ. ಕುಡಗುಂಟಿ, ಸಮುದಾಯದ ವಿವಿಧ ತಾಲೂಕಾ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜ ಬಾಂಧವರು, ಗಣ್ಯರುಗಳು , ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.