ಯುವ ಮತದಾರರು ಮತದಾನದಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ: ಜಿಲ್ಲಾಧಿಕಾರಿ

ಧಾರವಾಡ03:  ಹೊಸದಾಗಿ ಮತದಾನಕ್ಕೆ ಅರ್ಹತೆ ಪಡೆದುಕೊಂಡಿರುವ  ಯುವ ಮತದಾರರು ಅತ್ಯುತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿ ಚುನಾವಣೆಗೆ ಹಬ್ಬದ ಸ್ವರೂಪ ತರಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹೊಣೆಗಾರಿಕೆಯಾಗಿದೆ ಎಂದು ನಗರದ ಕನರ್ಾಟಕ ಕಾಲೇಜು ವೃತ್ತದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ (ಸ್ವೀಪ್) ಸಮಿತಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಮತದಾರರ ಜಾಗೃತಿಗಾಗಿ ಸಹಿ ಸಂಗ್ರಹಣೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಬರುವ ಏ. 23 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಜಿಲ್ಲೆಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಿಸಲು, ಜಿಲ್ಲಾ ಸ್ವೀಪ್ ಸಮಿತಿ ಪ್ರತಿದಿನ ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

18 ವರ್ಷ ತುಂಬಿದ ಯುವಜನರು, ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಬೇಕು. ಮತದಾನ ಮಾಡಿ ಶಾಹಿ ಹಾಕಿಸಿಕೊಂಡು ಉತ್ತಮ ಸೆಲ್ಫಿ ತೆಗೆದು ಕಳಿಸಿದವರಿಗೆ  ಬಹುಮಾನ ನೀಡಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಚುನಾವಣಾ ಆ್ಯಪ್ ಅಥವಾ 1950 ಉಚಿತ ಸಹಾಯವಾಣಿ ಮೂಲಕ ಖಚಿತಪಡಿಸಿಕೊಳ್ಳಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಎಲ್ಲರೂ ಸಹಕಾರ ನೀಡಬೇಕು. ಚುನಾವಣಾ ಅಕ್ರಮಗಳನ್ನು ನಡೆಸಲು ಯಾರಾದರೂ ಪ್ರಯತ್ನಿಸಿದರೆ ಅಂತಹ ಮಾಹಿತಿಗಳನ್ನು ಸಿವಿಜಿಲ್ ಆ್ಯಪ್ ಮೂಲಕ ಅಥವಾ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು " ನಾನು ಖಂಡಿತವಾಗಿ ಏ.23 ರಂದು ಮತ ಚಲಾವಣೆ ಮಾಡುತ್ತೇನೆ" ಎಂದು ಬರೆದು ಸಹಿ ಹಾಕುವ ಮೂಲಕ ಸಹಿ ಸಂಗ್ರಹಣೆ ಅಭಿಯಾನಕ್ಕೆ ಚಾಲನೆ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ, ಜಿಪಂ ಸಿಇಓ ಡಾ.ಬಿ.ಸಿ.ಸತೀಶ ಅವರು "ಮತದಾನ ಮಾಡಿದವನೇ ಮಹಾಶೂರ" ಎಂದು ಬರೆದು ಸಹಿ ಹಾಕಿ ಯುವಜನರನ್ನು ಹುರಿದುಂಬಿಸಿದರು.

ತಾಲ್ಲೂಕ ಸ್ವೀಪ್ ಸಮಿತಿ ಅಧ್ಯಕ್ಷ, ತಾ.ಪಂ.ಕಾರ್ಯನಿವರ್ಾಹಕ ಅಧಿಕಾರಿ ಎಸ್.ಎಸ್.ಖಾದ್ರೊಳ್ಳಿ , ಕ್ಷೇತ್ರ ಶಿಕ್ಷಾಧಿಕಾರಿಗಳಾದ ಎ.ಎ.ಖಾಜಿ, ವಿದ್ಯಾ ನಾಡಿಗೇರ, ಗಿರೀಶ ಪದಕಿ, ಶ್ರೀಶೈಲ ಕರಿಕಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪುಟ್ಟಪ್ಪನವರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಎಫ್.ಬಿ.ಕಣವಿ, ಕೀತರ್ಿವತಿ ಮತ್ತು ಸಂಗಡಿಗರು ಚುನಾವಣಾ ಗೀತೆಗಳನ್ನು ಹಾಡಿದರು. ಕೆ.ಎಂ.ಶೇಖ್, ಜಿ.ಎನ್.ನಂದನ್ ನಿರೂಪಿಸಿದರು.

ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಕೃಷಿ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯ ಅಧಿಕಾರಿಗಳು, ಶಿಕ್ಷಕರು, ನೌಕರರು, ಯುವಜನರು ಸಹಸ್ರಾರು  ಸಂಖ್ಯೆಯಲ್ಲಿ ಭಾಗವಹಿಸಿದ್ದರು