ಧಾರವಾಡ 04: ರಾಜ್ಯ ಚುನಾವಣಾ ಆಯೋಗದ ನಿದರ್ೆಶನದಂತೆ ನಗರ ಸ್ಥಳೀಯ ಸಾರ್ವತ್ರಿಕ ಚುನಾವಣೆಗಳು 2019 ನೇದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಧಾರವಾಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಪುರಸಭೆ, ನವಲಗುಂದ ಪಟ್ಟಣ ಪಂಚಾಯತ್, ಅಳ್ನಾವರ, ಕಲಘಟಗಿ ಕಾರ್ಯವ್ಯಾಪ್ತಿಗಳಿಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿಯನ್ನು ರಚಿಸಲಾಗಿದೆ.
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನವಲಗುಂದ, ಧಾರವಾಡ ಹಾಗೂ ಕಲಘಟಗಿ ತಹಶೀಲ್ದಾರರುಗಳನ್ನು ಸದಸ್ಯರನ್ನಾಗಿ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೆಶಕರನ್ನು ಸದಸ್ಯ ಕಾರ್ಯದಶರ್ಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿಯು ಪ್ರಚಲಿತದಲ್ಲಿರುವ ನಿಯಮಗಳಂತೆ ಹಾಗೂ ರಾಜ್ಯ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ವಯ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಯಾಗುವಂತೆ ನೋಡಿಕೊಳ್ಳತಕ್ಕದ್ದು.
ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಕಾಲಕಾಲಕ್ಕೆ ಮಾಹಿತಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶಿಸಿದ್ದಾರೆ.